ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ದೇಶಿ ಕೋಳಿ ಮರಿಗಳನ್ನು ವಿತರಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಅರ್ಹ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರು / ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್15, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಅಥವಾ ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ, ಆನೇಕಲ್, ಬೆಂಗಳೂರು ನಗರ ಜಿಲ್ಲೆ-562106 ಇಲ್ಲಿ ಭೇಟಿ ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಆನೇಕಲ್ ಪಶುವೈದ್ಯ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
