HomeLatest Newsಗ್ರಾಮೀಣ ಭಾಗದ ಮಹಿಳೆಯರಿಂದ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ

ಗ್ರಾಮೀಣ ಭಾಗದ ಮಹಿಳೆಯರಿಂದ ಕೋಳಿ ಮರಿ ಪಡೆಯಲು ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ದೇಶಿ ಕೋಳಿ ಮರಿಗಳನ್ನು ವಿತರಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದ್ದು, ಅರ್ಹ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರು / ಸ್ವಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್15, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ನಮೂನೆಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಂಸ್ಥೆಗಳಿಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಅಥವಾ ಮುಖ್ಯ ಪಶುವೈದ್ಯಾಧಿಕಾರಿಗಳ ಕಚೇರಿ (ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ, ಆನೇಕಲ್‍, ಬೆಂಗಳೂರು ನಗರ ಜಿಲ್ಲೆ-562106 ಇಲ್ಲಿ ಭೇಟಿ ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಆನೇಕಲ್‍ ಪಶುವೈದ್ಯ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular