ಧಾರವಾಡ : 2025-26 ನೇ ಶೈಕ್ಷಣಿಕ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಕಲ್ಪಿಸಲು ಅರ್ಜಿ ಅಹ್ವಾನಿಸಲಾಗಿದೆ.
ಆಯ್ಕೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯ, ಸಮವಸ್ತ್ರ, ಪಠ್ಯ ಪುಸ್ತಕ ಇನ್ನಿತರೇ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಆಸಕ್ತ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಮೇ 03, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

