ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಶಿವಮೊಗ್ಗ ಜಿಲ್ಲೆಯ ನೊಂದಾಯಿತ ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 18 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಅರ್ಹ 5ನೇ ತರಗತಿ ಉತ್ತೀರ್ಣರಾಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಎಲ್ಲಾ ತಾಲೂಕಗಳ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮೇ 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂ.ಸಂ.: 7022796636 ನ್ನು ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
You Might Also Like
TAGGED:ಅರ್ಹತಾ ಪರೀಕ್ಷೆ