ಪ್ರತಿಷ್ಠಿತ ಶಾಲೆಗಳಿಗೆ ಸೇರಬಯಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಠಿತ ಶಾಲೆಗಳನ್ನು ಗುರುತಿಸಿ, ಅಂತಹ ವಸತಿ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ವಿದ್ಯಾರ್ಥಿಗಳನ್ನು ದಾಖಲು ಮಾಡಿಸಿ, ಆ ವಿದ್ಯಾಸಂಸ್ಥೆಗಳು/ಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಭೋಜನಾ ವೆಚ್ಚವನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಭರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ.

ಷರತ್ತುಗಳು, ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದ್ದು, ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 9.05.2024 ಹಾಗೂ ಕೊನೆಯ ದಿನಾಂಕ 21.05.2024 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ.: 080-29787448, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೇವನಹಳ್ಳಿ ದೂ.ಸಂ.: 080-27681784, ದೊಡ್ಡಬಳ್ಳಾಪುರ ದೂ.ಸಂ.: 080- 27623681, ನೆಲಮಂಗಲ ದೂ.ಸಂ.: 080- 27723172 ಹಾಗೂ ಹೊಸಕೋಟೆ ದೂ.ಸಂ.: 080- 27931528 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read