HomeKarnatakaಗಮನಿಸಿ : 'ಕಿರು ಅಕ್ಕ ಕೆಫೆ' ನಿರ್ವಹಿಸಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಗಮನಿಸಿ : ‘ಕಿರು ಅಕ್ಕ ಕೆಫೆ’ ನಿರ್ವಹಿಸಲು ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಧಾರವಾಡ : ದೀನ್’ದಯಾಳ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಧಾರವಾಡ ಶಹರದ ಜಿಲ್ಲಾ ಆಸ್ಪತ್ರೆ ಆವರಣದ ಕಟ್ಟಡದಲ್ಲಿ ಕಿರು ಅಕ್ಕ ಕೆಫೆ ಯೋಜನೆ ಅನುಷ್ಠಾನಗೊಳಿಸಲು ಮತ್ತು ನಿರ್ವಹಿಸಲು ಧಾರವಾಡ ಶಹರದ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತಾಂತ್ರಿಕ ಮತ್ತು ಆರ್ಥಿಕ ದಾಖಲೆಗಳ ಮತ್ತು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಮುದಾಯ ಸಂಘಟನಾಧಿಕಾರಿಗಳು ವಲಯ ಕಚೇರಿ ನಂ-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಧಾರವಾಡ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಸಮುದಾಯ ಸಂಘಟನಾಧಿಕಾರಿಗಳು ವಲಯ ಕಚೇರಿ ನಂ-01 ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಧಾರವಾಡ (ಮೊ-9632612668) ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular