ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025ರ ಸಂಬಂಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.
2025ರ ಅಕ್ಟೋಬರ್ 01ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಚಿತ್ರದುರ್ಗ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ನಾಗರಿಕರು, ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಜಿಲ್ಲಾ ಕಛೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು 2025ರ ಆಗಸ್ಟ್ 25ರೊಳಗಾಗಿ ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಪೇಡಿಯಂ ಹತ್ತಿರ, ಬಾಲಭವನ ಆವರಣ, ಚಿತ್ರದುರ್ಗ ಈ ಕಛೇರಿಗೆ ಸಲ್ಲಿಸುವುದು. ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸ್ಟೇಡಿಯಂ ಹತ್ತಿರ, ಬಾಲಭವನ ಆವರಣ, ಚಿತ್ರದುರ್ಗ ಕಛೇರಿ ದೂರವಾಣಿ ಸಂಖ್ಯೆ 08194-235284 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.