HomeLatest Newsಡಿಪ್ಲೊಮಾ ಕೋರ್ಸ್ ಗಳಿಗೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಡಿಪ್ಲೊಮಾ ಕೋರ್ಸ್ ಗಳಿಗೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಅಖಿಲ ಭಾರತ ಮಟ್ಟದಲ್ಲಿ 2025-26 ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸ್ಗಳಲ್ಲಿ ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸ್ಗಳಲ್ಲಿ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ ಅಪಾರೇಲ್ ಡಿಸೈನ್ ಅಂಡ್ ಫ್ಯಾಬ್ರಿಕೇಷನ್ ಟಿಕ್ನಾಲಜಿ, ಎಲೆಕ್ಟಿçಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟಿçಕಲ್ ವೆಹಿಕಲ್ ಟೆಕ್ನಾಲಜಿ ಕೋರ್ಸ್ಗಳು ಲಭ್ಯವಿದೆ.

ಅರ್ಜಿ ಸಲ್ಲಿಸಲು ಕರ್ನಾಟಕ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹಾಗೂ ಶೇ.40 ರಷ್ಟು ಮೇಲ್ಪಟ್ಟ ಮೂಳೆ ಮತ್ತು ಕೀಲು ಅಂಗವಿಕಲತೆ, 60 ಡಿಬಿ ಮೇಲ್ಪಟ್ಟ ಕಿವುಡು ಮತ್ತು ಮೂಗು ಅಂಗವಿಕಲತೆ ಹಾಗೂ ಅಂಧತ್ವ-6/60 ಅಥವಾ 20/200 ಸ್ನೆಲೆನ್ಗಳನ್ನು ಲಕ್ಷಣವನ್ನು ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಜೂ.23 ಕೊನೆಯ ದಿನಾಂಕವಾಗಿದ್ದು, ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯಲಿದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಲಿದ್ದು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯವನ್ನು ಒದಗಿಸಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಜೆಎಸ್ಎಸ್ ವಿಶೇಷಚೇತರ ಪಾಲಿಟೆಕ್ನಿಕ್ ಕಾಲೇಜಿನಿಂದ (ಸಾಮಾನ್ಯ ವರ್ಗದವರಿಗೆ ರೂ.100, ಎಸ್ಸಿ/ಎಸ್ಟಿ/ಸಿ-1 ವರ್ಗದವರಿಗೆ ರೂ.50)ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.jsspda.org ಅಥವಾ ಮೊ.ಸಂ: 9844644937 ಗೆ ಸಂಪರ್ಕಿಸಬಹುದು ಎಂದು ಜೆಎಸ್ಎಸ್ ವಿಶೇಷಚೇತನ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular