HomeKarnatakaಕೈಗಾರಿಕಾ ನಿವೇಶನಗಳ ಹಂಚಿಕೆಗೆ ಜವಳಿ ಉದ್ದಿಮೆದಾರರಿಂದ ಅರ್ಜಿ ಆಹ್ವಾನ

ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಜವಳಿ ಉದ್ದಿಮೆದಾರರಿಂದ ಅರ್ಜಿ ಆಹ್ವಾನ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆ.ಐ.ಎ.ಡಿ.ಬಿ) ವತಿಯಿಂದ ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ 154-58 ಎಕರೆ ಜೀನ್ಸ್ ಪಾರ್ಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಪ್ರತಿ ಎಕರೆಗೆ ತಾತ್ಕಾಲಿಕ ದರ 135 ಲಕ್ಷ ರೂ.ಗಳನ್ನು ನಿಗಪಡಿಸಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಕೈಗಾರಿಕಾ ನಿವೇಶನಗಳ ಹಂಚಿಕೆಗೆ ದರವನ್ನು ಪರಿಷ್ಕರಣೆ ಮಾಡಿ ತಾತ್ಕಾಲಿಕವಾಗಿ ಪ್ರತಿ ಎಕರೆಗೆ 67.50 ಲಕ್ಷ ರೂಗಳನ್ನು ನಿಗದಿಪಡಿಸಲಾಗಿದ್ದು, ಜಿಲ್ಲೆಯ ಆಸಕ್ತ ಜವಳಿ ಉದ್ದಿಮೆದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಆಸಕ್ತರು ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಆನ್‌ಲೈನ್ ವೆಬ್‌ಸೈಟ್ https://investkarnataka.co.in/karnataka-udyog-mitra/ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೆಐಎಡಿಬಿ ಕಚೇರಿ ಅಥವಾ ದೂ.9964768334, 9901313417, 9844837264 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular