HomeKarnatakaಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ

ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6, 7, 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ – ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ವಾರದಲ್ಲಿ ಎರಡು ದಿನಗಳಂತೆ 6 ತಿಂಗಳ ತರಬೇತಿ ನೀಡುವ ನಿಟ್ಟಿನಲ್ಲಿ ಅರ್ಹ ಮಹಿಳಾ ಮತ್ತು ಪುರುಷ (ಮಹಿಳೆಯರಿಗೆ ಮೊದಲ ಆದ್ಯತೆ) ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ನೀಡುವ ತರಬೇತುದಾರರಿಗೆ ಸಂಭಾವನೆ ರೂ.750 ಮತ್ತು ಪ್ರಯಾಣ ವೆಚ್ಚ ರೂ.100 ರಂತೆ ನೀಡಲಾಗುತ್ತಿದ್ದು, ಆಸಕ್ತ ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ಪಡೆದ ಮಹಿಳೆ ಮತ್ತು ಪುರುಷ ತರಬೇತುದಾರರು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ ಮತ್ತು ವಿವರಗಳಿಗಾಗಿ ಆನ್ ಲೈನ್ ವೆಬ್ ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಜಿಲ್ಲೆಯ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ (ಬಳ್ಳಾರಿ-8310321101, ಸಂಡೂರು-9036925966/ 8660575061 ಮತ್ತು ಸಿರುಗುಪ್ಪ-9148889975) ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular