ಪಡಿತರ ಚೀಟಿ, ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ದುರಸ್ತಿಗೆ ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2023-24 ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯದ ಅರ್ಹ ಫಲಾನುಭವಿಗಳ ಮನೆಯ ಮೇಲ್ಚಾವಣಿ ರಿಪೇರಿ ಅಥವಾ ದುರಸ್ತಿಪಡಿಸಿಕೊಳ್ಳುವುದಕ್ಕಾಗಿ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಫಲಾನುಭವಿಗಳು ಸೆ.3 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಬೇಕಾದ ದಾಖಲೆಗಳು:

ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಹಾಗೂ ಹಾನಿಗೊಳಗಾದ ಮನೆಯ ಭಾವಚಿತ್ರದೊಂದಿಗೆ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿಯ ಕಚೇರಿಗೆ ಸಂಪರ್ಕಿಸಬಹುದು ಎಂದು ಕುಡತಿನಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read