HomeKarnatakaಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ದೇವರಾಜ ಅರಸು ವಸತಿ ಯೋಜನೆಯಡಿ ಸೌಲಭ್ಯ

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ದೇವರಾಜ ಅರಸು ವಸತಿ ಯೋಜನೆಯಡಿ ಸೌಲಭ್ಯ

ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ತೃತೀಯ ಲಿಂಗಿ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಆಸಕ್ತ ಅರ್ಹ ತೃತೀಯ ಲಿಂಗಿ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆ.08 ಕೊನೆಯ ದಿನವಾಗಿರುತ್ತದೆ.

ದಾಖಲೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿದಾರರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ನಿವೇಶನದ ಖಾತೆಯ ನಕಲು ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ನಕಲು ಪ್ರತಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಫೋಟೋ ಒದಗಿಸಬೇಕು.

ತೃತೀಯ ಲಿಂಗಿ ಅರ್ಜಿದಾರರು ಮಾತ್ರ ಅರ್ಹರಾಗಿದ್ದು, ಅವರ ಕುಟುಂಬವು ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕಡಿಮೆ ಇರಬೇಕು. ಅರ್ಜಿದಾರರು ವಸತಿ ರಹಿತ, ಶೂನ್ಯ ಕೋಣೆ, ಒಂದು ಕೋಣೆ, ಎರಡು ಕೋಣೆಯೊಂದಿಗೆ ಕಚ್ಚಾ ಗೋಡೆ ಹಾಗೂ ಕಚ್ಚಾ ಛಾವಣಿ ಹೊಂದಿದವರು ಸಹ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಅಥವಾ ಕುಟುಂಬದ ಸದಸ್ಯರ ಹೆಸರಿನಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ಬದಲಾಗಿ ಶಿಥಿಲಗೊಂಡ ಮನೆ, ಗುಡಿಸಲು, ಖಾಲಿ ನಿವೇಶನದಲ್ಲಿ ವಾಸಿಸುತ್ತಿರುವವರು ಅರ್ಹರಾಗಿರುತ್ತಾರೆ.

ಅರ್ಜಿದಾರರು ಸ್ವಂತ ನಿವೇಶನ ಹೊಂದಿದಲ್ಲಿ, ನಿವೇಶನಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರಬೇಕು. ಬೇರೆ ಯಾವುದೇ ಯೋಜನೆಗಳಡಿ ಹಾಗೂ ಇಲಾಖೆ ವತಿಯಿಂದ ಸೌಲಭ್ಯ ಪಡೆದಿರಬಾರದು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಕಂಪ್ಲಿ ಪುರಸಭೆ ಕಾರ್ಯಾಲಯದ ಆಶ್ರಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular