HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹಧನಕ್ಕೆ ಆನ್ ಲೈನ್ ನಲ್ಲಿ ಅರ್ಜಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ಪ್ರೋತ್ಸಾಹಧನಕ್ಕೆ ಆನ್ ಲೈನ್ ನಲ್ಲಿ ಅರ್ಜಿ

2024-25ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನವಾಗಿದೆ.

ಅರ್ಹ ಅಭ್ಯರ್ಥಿಗಳು ನಿವಾಸಿ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಶುಲ್ಕ ರಶೀದಿ, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವ್ಯಾಸಂಗ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್‍ಬುಕ್ (ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡಿಸಿರಬೇಕು) ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜಾಲತಾಣ https://sevsindhu.karnataka.gov.in  ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 08194-235134 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular