ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶದವರಿಗಾಗಿ ಗುರುತಿಸಲಾದ ವಿವಿಧ ವೃಂದಗಳ ಹುದ್ದೆಗಳನ್ನು ಮತ್ತು ಮಾತೃ ವೃಂದದಲ್ಲಿನ ವಿವಿಧ ವೃಂದಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 25 ಕೊನೆಯ ದಿನವಾಗಿದೆ. ವರದಿಗಾರರು, ಜೂನಿಯರ್ ಪ್ರೋಗ್ರಾಮರ್, ಕಂಪ್ಯೂಟರ್ ಆಪರೇಟರ್, ಸ್ವೀಪರ್, ದಲಾಯತ್, ಕಿರಿಯ ಸಹಾಯಕರು, ಕಿರಿಯ ಗ್ರಂಥಾಲಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸ್ವೀಕರಿಸಲು ನಿಗದಿತ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 41 ವರ್ಷ ಮೀರಿರಬಾರದು.

ಆಫ್ಲೈನ್ ಮೂಲಕ ನವೆಂಬರ್ 25ರೊಳಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ವಿಳಾಸ: ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಅಂಚೆ ಪೆಟ್ಟಿಗೆ ಸಂಖ್ಯೆ 5074, ಮೊದಲನೆ ಮಹಡಿ, ವಿಧಾನಸೌಧ, ಬೆಂಗಳೂರು, 560 001 ಅರ್ಜಿ ಶುಲ್ಕ 500 ರೂಪಾಯಿ ನಿಗದಿಪಡಿಸಲಾಗಿದೆ.

ಅರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿ ನಮೂನೆ -1ರ ದ್ವಿಪ್ರತಿಯಲ್ಲಿ ಅರ್ಜಿಗಳನ್ನು ಸರ್ಕಾರಿ ಪುಸ್ತಕ ಮಳಿಗೆಯಿಂದ ಪಡೆದು ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಸರ್ಕಾರಿ ಮುದ್ರಣಾಲಯದಲ್ಲಿ ದೊರೆಯುವುದು ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read