HomeKarnatakaಬೆಂಗಳೂರಿನಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು  : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ನಿಂಬೇಕಾಯಿಪುರ ಪ್ರದೇಶದ ಒಟ್ಟು ಪಡಿತರ ಚೀಟಿ- 643 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಏಪ್ರಿಲ್ 27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಂಡದೊಂದಿಗೆ ಏಪ್ರಿಲ್ 6 ಕೊನೆಯ ದಿನ

ಬೆಂಗಳೂರು :   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಧಾರವಾಡ ಪ್ರಾದೇಶಿಕ ಕೇಂದ್ರವು ವಿದ್ಯಾರ್ಥಿಗಳ ಹಿತದೃಷ್ಠಿಯಿಂದ 2001-02 ರಿಂದ 2014-15ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್ಸಿ, ಎಲ್ಲಾ ಎಂ.ಎ, ಎಂ.ಕಾಂ, ಎಂ.ಬಿ.ಎ, ಎಲ್ಲಾ ಎಂ.ಎಸ್ಸಿ, ಎಲ್.ಎಲ್.ಎಂ, ಎಂ.ಲಿಬ್.ಐ.ಎಸ್ಸಿ, ಬಿ.ಇಡ್, ಎಂ.ಇಡ್, ಬಿ.ಇಡ್ (ವಿಶೇಷ) ಕೋರ್ಸ್ ಗಳಿಗೆ ಪ್ರವೇಶಾತಿ ಪಡೆದು ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ /ತಮ್ಮ ವೈಯಕ್ತಿಕ ಮತ್ತು ಅನಾರೋಗ್ಯ ಕಾರಣಗಳಿಂದಾಗಿ ಹಾಗೂ ಕೆಲಸದ ಒತ್ತಡಗಳಿಂದ ಪರೀಕ್ಷೆಯನ್ನು ತೆಗೆದುಕೊಂಡಿಲ್ಲದಂತಹ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿಯನ್ನು ಪಡೆದುಕೊಳ್ಳಲು ಬಾಕಿ ಇರುವ ವಿಷಯಗಳಿಗೆ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ವಿವಿಯ ಅಧಿಕೃತ ವೆಬ್ ಸೈಟ್: www.ksoumysuru.ac.in ನ ಮೂಲಕ ಪರೀಕ್ಷಾ ಶುಲ್ಕವನ್ನು ಕಡ್ಡಾಯಾಗಿ ಅಂತರ್ಜಾಲದ ಮೂಲಕ ಮಾತ್ರ ಪಾವತಿಸಬೇಕು, ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಮಾರ್ಚ್ 31 ಕೊನೆಯ ದಿನ ಹಾಗೂ 200 ರೂ. ದಂಡ ಶುಲ್ಕದೊಂದಿಗೆ ಏಪ್ರಿಲ್ 06 ಕೊನೆಯ ದಿನ. ಪರೀಕ್ಷಾ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಪ್ರಾದೇಶಿಕ ಕೇಂದ್ರ, ಅಮರಗೋಳ, 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ನವನಗರ ಹುಬ್ಬಳ್ಳಿ ಅಥವಾ ದೂರವಾಣಿ: 0836-2441199/7019314679 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular