HomeLive Newsಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಗಮನಿಸಿ : ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು :   ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪುಟ್ಟೇನಹಳ್ಳಿ ಪ್ರದೇಶದ ವಿನಾಯಕನಗರ ಒಟ್ಟು ಪಡಿತರ ಚೀಟಿ- 800 ಹಾಗೂ ಜರಗನಹಳ್ಳಿ ಪ್ರದೇಶದ ಚಿಕ್ಕಸ್ವಾಮಿ ಲೇಔಟ್ ನ ಒಟ್ಟು ಪಡಿತರ ಚೀಟಿ- 800 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ ಏಪ್ರಿಲ್ 23 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular