ವಿಜಯಪುರ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಮೀನುಗಾರರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನ ಖರೀದಿಗೆ 2025-26 ನೇ ಸಾಲಿನ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈ ಗ್ರಾಮಗಳ ಮೀನುಗಾರರು ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು ಅಥವಾ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಮೀನುಗಾರರು ಡಿ. 23 ರೊಳಗಾಗಿ ಸಂಬಂಧಿಸಿದ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮುದ್ದೇಬಿಹಾಳ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ: 9880210505 ಗೆ ಸಂಪರ್ಕಿಸಬಹುದು.

