HomeKarnatakaಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳ ತುಂಬಲು ಅರ್ಜಿ ಆಹ್ವಾನ

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳ ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಒಟ್ಟು 173 ಮತ್ತು ಮಹಿಳೆ 16 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಗಸ್ಟ್-12 ರೊಳಗೆ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ/ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ಶಿವಮೊಗ್ಗದಲ್ಲಿ ಪುರುಷ 37, ಮಹಿಳೆ 2 ಸಂಪರ್ಕಿಸಬೇಕಾದ ಘಟಕಾಧಿಕಾರಿ ಶೋಭರಾಜ್ ಮೊ.ಸಂ: -8310190881. ಕುಂಸಿ ಪುರುಷ 2 ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ ಜೆಟ್ಟಿ -9916573291, ಹಾರನಹಳ್ಳಿ ಪುರುಷ 18 ಘಟಕಾಧಿಕಾರಿ ಸಿ.ಮಧು -9686631428. ಭದ್ರಾವತಿ ಪುರುಷ 18, – ಘಟಕಾಧಿಕಾರಿ ಜಗದೀಶ್ -9900283490. ಹೊಳೆಹೊನ್ನೂರು ಪುರುಷ 6, ಮಹಿಳೆ 14- ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ -8105840345. ತೀರ್ಥಹಳ್ಳಿ ಪುರುಷ 10- ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ -9535388472. ಸಾಗರ ಪುರುಷ 15 -ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಜೋಗ ಪುರುಷ 5 -ಘಟಕಾಧಿಕಾರಿ ಡಿ.ಸಿದ್ದರಾಜು -9449699459. ಆನಂದಪುರ ಪುರುಷ 9- ಘಟಕಾಧಿಕಾರಿ ಎಂ.ರಾಘವೇಂದ್ರ -9632614031. ಶಿಕಾರಿಪುರ ಪುರುಷ 5- ಘಟಕಾಧಿಕಾರಿ ಡಾ.ಸಂತೋಷ್ ಎಸ್ ಶೆಟ್ಟಿ -9845402789. ಶಿರಾಳಕೊಪ್ಪ ಪುರುಷ 6 -ಘಟಕಾಧಿಕಾರಿ ವೀರಭದ್ರಸ್ವಾಮಿ -9741629961. ಹೊಸನಗರ ಪುರುಷ 16- ಘಟಕಾಧಿಕಾರಿ ಕೆ.ಅಶೋಕ್ -9241434669. ರಿಪ್ಪನ್‌ಪೇಟೆ ಪುರುಷ 16- ಘಟಕಾಧಿಕಾರಿ ಟಿ.ಶಶಿಧರಾಚಾರ್ಯ -9741477689. ಸೊರಬ ಪುರುಷ 13- ಘಟಕಾಧಿಕಾರಿ ಹೆಚ್.ಎಂ.ಪ್ರಶಾಂತ -7975306266.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ/ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular