ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ [email protected], 1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

