HomeKarnatakaರೈತರಿಗೆ ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ತಿರಸ್ಕೃತವಾದಲ್ಲಿ ಪುನರ್ ಪರಿಶೀಲನೆ

ರೈತರಿಗೆ ಗುಡ್ ನ್ಯೂಸ್: ಬಗರ್ ಹುಕುಂ ಅರ್ಜಿ ತಿರಸ್ಕೃತವಾದಲ್ಲಿ ಪುನರ್ ಪರಿಶೀಲನೆ

ಬೆಳಗಾವಿ: ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡಿ, ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular