25 ರೂ. ಸೇವಾ ಶುಲ್ಕ ಪಾವತಿಸಿ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ

ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹೊಸದಾಗಿ, ನವೀಕರಣದ ವಿಕಲಚೇತನರ  ರಿಯಾಯಿತಿ ಬಸ್‍ ಪಾಸ್ ಗಾಗಿ ಆನ್ ಲೈನ್‍ ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸರ್ಕಾರದ ನಿರ್ದೇಶನದಂತೆ ಅರ್ಜಿ ಸಲ್ಲಿಸುವ ವಿಕಲಚೇತನ ಫಲಾನುಭವಿಗಳಿಗೆ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸುತ್ತಿವೆ. ನೂತನ ಬಸ್ ಪಾಸ್ ಪಡೆಯಲು ಹಾಗೂ ಹಾಲಿ ಪಾಸುಗಳ ನವೀಕರಣಕ್ಕಾಗಿ 2025ರ ಫೆ.28 ರವರೆಗೆ ಅವಕಾಶ ನೀಡಿದೆ.

ವಿಕಲಚೇತನರು ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಹೆಚ್ಚಿನ ಸೇವಾಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸುತ್ತಿರುವುದು. ಇದರಿಂದ ವಿಕಲಚೇತನರಿಗೆ ಆರ್ಥಿಕ ತೊಂದರೆಯಾಗುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲೆಯ ವಿಕಲಚೇತನರು ಹೊಸದಾಗಿ, ನವೀಕರಣದ ಬಸ್ ಪಾಸ್ ಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳು ಹಾಗೂ ನಗರ ವ್ಯಾಪ್ತಿಯಲ್ಲಿರುವ ಕರ್ನಾಟಕ ಒನ್ ಕೇಂದ್ರಗಳಲ್ಲಿ 25 ರೂ. ಸೇವಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read