ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿ ಒಂದಿದೆ. ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಮಾಡಲು ಜನವರಿ 12 ಕೊನೆಯ ದಿನವಾಗಿದೆ.
ಕೊಪ್ಪಳ ತಾಲೂಕಿನ ದದೇಗಲ್‌ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ (ತಾತ್ಕಾಲಿಕ) ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ದರ್ಜೆಯಲ್ಲಿ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಹೊಂದಿದ ಮತ್ತು ಡಿ.ಟಿ.ಡಿ.ಎಮ್ ವಿಭಾಗಕ್ಕೆ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಆಧಾರಿತ ಬಿ.ಇ ಪದವಿ ಹೊಂದಿದ, ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ, ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರಿಂಗ್ ಮತ್ತು ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿದ ಆಸಕ್ತ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು ಜನವರಿ 12 ರೊಳಗಾಗಿ ಜಿಟಿಟಿಸಿ ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್: [email protected] ಗೆ ನಿಮ್ಮ ಸ್ವ-ವಿವರವುಳ್ಳ ಬಯೋಡೆಟಾವನ್ನು ಕಳುಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯವನ್ನು ಸಂಪರ್ಕಿಸಿ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್, ಕೊಪ್ಪಳ ಇವರನ್ನು ಸಂಪರ್ಕಿಸಿ, ಮೊಬೈಲ್ ಸಂಖ್ಯೆ 7507094445.
ವಿವಿಧ ತರಬೇತಿಗೆ ಅರ್ಜಿ ಆಹ್ವಾನ: ಹಳಿಯಾಳ ಆರ್‌ಸೆಟಿ ಸಂಸ್ಥೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 19 ರಿಂದ 31 ದಿನಗಳ ತರಬೇತಿ ನೀಡಲಾಗುತ್ತದೆ.
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ(ರಿ) ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಹ್ಯಾಂಡ್ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಕರೆಯಲಾಗಿದೆ.
18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ಕರೆ ಮೂಲಕ ಹಾಗೂ ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ ಬರೆದು 9483485489 ಗೆ ವಾಟ್ಸಪ್ ಮಾಡುವ ಮೂಲಕ ಅಥವಾ https://forms.gle/KgvX5fHzQ4Zp3bui7 ಲಿಂಕ್ ಬಳಸಿ ಹೆಸರು ನೋಂದಾಯಿಸಬಹುದು.
ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ನೀಡಲಾಗುತ್ತದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ದೂರವಾಣಿ ಸಂಖ್ಯೆಯನ್ನು 9742438790, 9483485489 ಗೆ ಸಂಪರ್ಕಿಸಬಹುದು.

