ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಎಲೆಕ್ಟ್ರಿಕಲ್ ವಿಭಾಗದಲ್ಲಿ ಅತಿಥಿ ಬೋಧಕ ಹುದ್ದೆಗೆ ಅರ್ಹರಿಂದ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಇಇಇ ವಿಭಾಗದಲ್ಲಿ ಬಿಇ (ಬಿ.ಟೆಕ್) ಪದವಿ ಪೂರ್ಣಗೊಳಿಸಿದ ಪದವೀಧರರಾಗಿರಬೇಕು. 3 ರಿಂದ 5 ವರ್ಷಗಳ ಅನುಭವವಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ ಮೆಂಟ್‌ನ ಐಶ್ವರ್ಯ ಕಾಲೋನಿಯ ಐಟಿಐ ಕ್ಯಾಂಪಸ್‌ನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 08392-200087, 9620057086.

