ಮಂಗಳೂರು ಗ್ರಾಮಾಂತರದಲ್ಲಿ ಪೋಷಣ ಅಭಿಯಾನ ಯೋಜನೆಯಡಿ ತಾಲೂಕು ಸಂಯೋಜಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾಸಿಕ 20 ಸಾವಿರ ರೂ. ಗೌರವಧನ ನೀಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 2 ಕೊನೆಯ ದಿನವಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನದ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಇಲ್ಲಿಗೆ ಪೋಷಣ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು ಕನ್ನಡ ಹಾಗೂ ಆಂಗ್ಲ ಭಾಷೆ (ಮಾತು ಹಾಗೂ ಬರವಣಿಗೆ)ಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 20 ಸಾವಿರ ರೂ. ಗೌರವಧನವನ್ನು ನೀಡಲಾಗುತ್ತದೆ.
ಆಸಕ್ತರು ಮಾರ್ಚ್ 2 ರೊಳಗೆ ಸೂಕ್ತ ದಾಖಲೆಗಳೊಂದಿಗೆ ನಗರದ ಉರ್ವ ಮಾರ್ಕೆಟ್ ಕಟ್ಟಡದ 3ನೇ ಮಹಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಮಂಗಳೂರು (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

