ʻಯುವನಿಧಿʼ ಯೋಜನೆಗೆ ಅರ್ಜಿ ಸಲ್ಲಿಸುವುದು ಈಗ ಮತ್ತಷ್ಟು ಸುಲಭ : ಈ ವಿಡಿಯೋದಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ 5ನೇ ಗ್ಯಾರಂಟಿ “ಯುವನಿಧಿ” ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಫಲಾನುಭವಿಗಳು ಸೇವಾ ಸಿಧು ಪೋರ್ಟಲ್‌ ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಈ ಕೆಳಗಿನ ವಿಡಿಯೋದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದ್ದು,  ಅರ್ಹ ಫಲಾನುಭವಿಗಳು ಈ ಮಾಹಿತಿಯನ್ನು ಪಡೆದುಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhugs.karnataka.gov.in/  ಲಿಂಕ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆಯಿರಿ.

ಅರ್ಹರು:

2023ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರಾಗಿರಬೇಕು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು).

ದಾಖಲೆಗಳು:

ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read