HomeLatest News14500 ಅತಿಥಿ ಉಪನ್ಯಾಸಕರ ನೇಮಕ, 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಅಂತಿಮ ಹಂತಕ್ಕೆ

14500 ಅತಿಥಿ ಉಪನ್ಯಾಸಕರ ನೇಮಕ, 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಅಂತಿಮ ಹಂತಕ್ಕೆ

ಹುಬ್ಬಳ್ಳಿ: ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಶೇಕಡ 60ರಷ್ಟು ಬೋಧಕರ ಕೊರತೆ ಇದೆ ಎಂದು ತಿಳಿಸಿದ್ದಾರೆ.

ಬೋಧಕರ ಕೊರತೆ ಇರುವ ಕಾರಣ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12,000, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 2500 ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಹೆಚ್ಚು ವಿವಿಗಳನ್ನು ಸ್ಥಾಪಿಸಿದ ಕಾರಣ ಅವುಗಳ ಸ್ಥಿತಿ ಶೋಚನೀಯವಾಗಿದೆ. ನಾವು ವಿದೇಶಿ ವಿವಿ ಮಾದರಿ ಅನುಸರಿಸಲು ಸಾಧ್ಯವಿಲ್ಲ. ವಿದೇಶಿ ವಿವಿಗಳು ವಿದ್ಯಾರ್ಥಿಗಳ ಸಂಗ್ರಹಿಸುವ ಶುಲ್ಕದಿಂದ ನಡೆಯುತ್ತವೆ. ಇಲ್ಲಿ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡಬೇಕಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular