ಜೂನ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕಾತಿ ಆದೇಶ: ಒಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮ: ಕೆ.ಜೆ. ಜಾರ್ಜ್

ರಾಮನಗರ: ರಾಜ್ಯದಲ್ಲಿ 3000 ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ದೈಹಿಕ ತರಬೇತಿ ನಡೆಯುತ್ತಿದೆ. ಜೂನ್ ಅಂತ್ಯದೊಳಗೆ ಎಲ್ಲರಿಗೂ ಸ್ಥಳ ನಿಯುಕ್ತಿ ಮಾಡಿ ನೇಮಕಾತಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಸ್ವಾಧೀನಾನುಭವ ಪತ್ರ ಇಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಬಾರದು ಎನ್ನುವ ನಿಯಮದಿಂದ ಸಮಸ್ಯೆಯಾಗುತ್ತಿದೆ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಈ ನೀತಿ ಜಾರಿಗೆ ತಂದಿದೆ. ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನದಲ್ಲಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಪರಿಹಾರ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ರಮ ಕೃಷಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲಸೌಕರ್ಯ ಕಲ್ಪಿಸಿಕೊಂಡಲ್ಲಿ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read