
ನಾಳೆ ಬೆಂಗಳೂರಿಗೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಲಿದ್ದಾರೆ. ನಾಳೆ ಸಿಎಂ, ಡಿಸಿಎಂ ಜೊತೆ ಸಭೆ ನಡೆಸಲಿರುವ ಸುರ್ಜೇವಾಲ, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಸಂಬಂಧ ನಾಯಕರ ಜತೆ ಚರ್ಚೆ ನಡೆಸಲಿದ್ದಾರೆ. . ಆದ್ದರಿಂದ ಸುರ್ಜೇವಾಲ ನೇತೃತ್ವದಲ್ಲಿ ನಡೆಯುವ ಈ ಸಭೆ ಮಹತ್ವ ಪಡೆದುಕೊಂಡಿದೆ.
ಈಗಾಗಲೇ ಸಿದ್ದರಾಮಯ್ಯ ಅವರು 25 ಶಾಸಕರ ಪಟ್ಟಿ ಸಿದ್ಧಪಡಿಸಿಕೊಂಡಿದ್ದಾರೆ. ಕಾರ್ಯಕರ್ತರಿಗೂ ಅವಕಾಶ ನೀಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದಾರೆ. ನಾಳಿನ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.

