ಆರ್.ಎಸ್.ಎಸ್. ಸದಸ್ಯನಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ ನೀಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹಾಪೋಷಕರಾಗಿರುವ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಗೆ ತಿಪಟೂರಿನ ಆರ್.ಎಸ್.ಎಸ್. ಸದಸ್ಯ ಡಾ. ಶ್ರೀಧರ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಟ್ರಸ್ಟಿಯಾಗಿ ಅವರನ್ನು ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.
ಕೆ.ಎನ್. ರಾಜಣ್ಣ ರಾಜೀನಾಮೆ ನಂತರ ಸಹಕಾರ ಖಾತೆ ಸಿಎಂ ಬಳಿ ಇದೆ. ಸಹಕಾರ ಇಲಾಖೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಯಶಸ್ವಿನಿ ಟ್ರಸ್ಟ್ ಗೆ ಶ್ರೀಧರ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುವಂತೆ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ಮುಖಂಡ ಟೂಡಾ ಶಶಿಧರ್ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್. ಸದಸ್ಯ ಶ್ರೀಧರ್ ಕುಮಾರ್ ಅವರಿಗೆ ನೀಡಿದ ಸದಸ್ಯತ್ವ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
