HomeLive Newsಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಯಶಸ್ವಿನಿ ಟ್ರಸ್ಟ್’ ಗೆ RSS ಸದಸ್ಯನ ನೇಮಕ: ಕಾಂಗ್ರೆಸ್ ಕಾರ್ಯಕರ್ತರ ವಿರೋಧ

ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಯಶಸ್ವಿನಿ ಟ್ರಸ್ಟ್’ ಗೆ RSS ಸದಸ್ಯನ ನೇಮಕ: ಕಾಂಗ್ರೆಸ್ ಕಾರ್ಯಕರ್ತರ ವಿರೋಧ

ಆರ್.ಎಸ್.ಎಸ್. ಸದಸ್ಯನಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ ನೀಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹಾಪೋಷಕರಾಗಿರುವ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಗೆ ತಿಪಟೂರಿನ ಆರ್.ಎಸ್.ಎಸ್. ಸದಸ್ಯ ಡಾ. ಶ್ರೀಧರ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಟ್ರಸ್ಟಿಯಾಗಿ ಅವರನ್ನು ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಕೆ.ಎನ್. ರಾಜಣ್ಣ ರಾಜೀನಾಮೆ ನಂತರ ಸಹಕಾರ ಖಾತೆ ಸಿಎಂ ಬಳಿ ಇದೆ. ಸಹಕಾರ ಇಲಾಖೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಯಶಸ್ವಿನಿ ಟ್ರಸ್ಟ್ ಗೆ ಶ್ರೀಧರ್ ಕುಮಾರ್ ಅವರನ್ನು ನೇಮಕ ಮಾಡಿದ್ದು, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುವಂತೆ ಒತ್ತಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಮುಖಂಡ ಟೂಡಾ ಶಶಿಧರ್ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್.ಎಸ್.ಎಸ್. ಸದಸ್ಯ ಶ್ರೀಧರ್ ಕುಮಾರ್ ಅವರಿಗೆ ನೀಡಿದ ಸದಸ್ಯತ್ವ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular