ಮೂವರು ಡಿಸಿಎಂ ನೇಮಕ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಮೂವರು ಡಿಸಿಎಂಗಳ ನೇಮಕ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಈ ವಿಚಾರದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ. ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಎರಡು ಒಂದೇ ಎಂದರು. ಮೂರು ಡಿಸಿಎಂ ಹುದ್ದೆ ಬಗ್ಗೆ ಯಾರು ಎಲ್ಲಿ ಚರ್ಚೆ ಮಾಡಿದ್ದಾರೆ? ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ 3 ಡಿಸಿಎಂ ಹುದ್ದೆ ಸೃಷ್ಟಿ ಮಾಡಲಿ ಎಂಬ ಸಲಹೆಯನ್ನು ನೀಡಿದ್ದಾರೆ. ಆದರೆ ಹೈಕಮಾಂಡ್ ದೃಷ್ಟಿಕೋನ ಏನು ಅನ್ನೋದು ಗೊತ್ತಿಲ್ಲ.ಮೂವರನ್ನು ಡಿಸಿಎಂ ಮಾಡಿದರೆ ಲೋಕಸಭೆ ಚುನಾವಣೆಯನ್ನು ಗೆಲ್ಲಬಹುದು ಇದು ಹೈಕಮಾಂಡ್ ಗಮನದಲ್ಲಿದ್ದರೆ ಅವರು ಮಾಡೇ ಮಾಡುತ್ತಾರೆ ಎಂದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read