HomeJobsಮೇ 11ರಂದು ಅಪ್ರೆಂಟಿಶಿಪ್ ಮೇಳ: ಖಾಸಗಿ ಕಂಪನಿಗಳಿಂದ ಅಭ್ಯರ್ಥಿಗಳಿಗೆ ಸಂದರ್ಶನ

ಮೇ 11ರಂದು ಅಪ್ರೆಂಟಿಶಿಪ್ ಮೇಳ: ಖಾಸಗಿ ಕಂಪನಿಗಳಿಂದ ಅಭ್ಯರ್ಥಿಗಳಿಗೆ ಸಂದರ್ಶನ

ಕೊಪ್ಪಳ: ಕೊಪ್ಪಳ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು (ಅಪ್ರೆಂಟಿಶಿಪ್) ಮೇಳವನ್ನು ಮೇ 11 ರಂದು ಬೆಳಿಗ್ಗೆ 10 ಗಂಟೆಗೆ ಕುಕನೂರಿನ ಗುದ್ನೆಪ್ಪನ ಮಠದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಬೆಂಗಳೂರಿನ ಪ್ರಮುಖ ಕಂಪನಿಗಳಾದ  Toyota Industries Engine India Pvt Ltd, Shindegen India Pvt.Ltd, Schneider Electric India Pvt .Ltd, AT India Auto parts Pvt Ltd, Toyoda Gosei South India Pvt Ltd, Auotliv India Pvt Ltd, Avirata Defence system Ltd, Samvardhan Motherson International Pvt Ltd  ಸೇರಿದಂತೆ ಹಲವು ಕಂಪನಿಗಳು ಭಾಗವಹಿಸಿ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿ.ಎ., ಬಿ.ಕಾಂ., ಬಿ.ಎಸ್‌ಸಿ ಹಾಗೂ ಐಟಿಐ ಎಲ್ಲಾ ವೃತ್ತಿಗಳಲ್ಲಿ ಉತ್ತೀರ್ಣರಾದವರು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು (ಮಹಿಳೆ ಮತ್ತು ಪುರುಷರು) ಈ ಮೇಳದಲ್ಲಿ ಭಾಗವಹಿಸಲು ಅರ್ಹರಿದ್ದು, ಅಭ್ಯರ್ಥಿಗಳ ವಯೋಮಿತಿ 18 ರಿಂದ 24 ವರ್ಷಗಳೊಳಗಿರಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಸುಮಾರು ರೂ.18,500 ರಿಂದ ರೂ.21,000 ವರೆಗೆ ಸ್ಟೈಫಂಡ್ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಅಂಕಪಟ್ಟಿಗಳ ಝೆರಾಕ್ಸ್ ಪ್ರತಿಗಳು, 2 ಪಾಸ್‌ಪೋರ್ಟ್ ಅಳತೆಯ ಫೋಟೋ ಹಾಗೂ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಮೇಳಕ್ಕೆ ಆಗಮಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9964247098, 9481718859, 8618952961 ಹಾಗೂ 8197245007 ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕುಕನೂರ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular