HomeKarnatakaಕಾನೂನು ಪದವೀಧರರ ಶಿಷ್ಯವೇತನ : ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಕಾನೂನು ಪದವೀಧರರ ಶಿಷ್ಯವೇತನ : ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅ.31ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಅರ್ಹತೆಗಳು: ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ, ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್ನಲ್ಲಿ ಹೆಸರು ನೊಂದಾಯಿಸಿರಬೇಕು. ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿದ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಯಾಗಿರಬೇಕು ಹಾಗೂ ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ ಹಾಗೂ ಬಾರ್ ಕೌನ್ಸಿಲ್ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200215/224 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular