HomeKarnataka'KSRTC' ಯಲ್ಲಿ ಶಿಶಿಕ್ಷು ತರಬೇತಿ ; ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

‘KSRTC’ ಯಲ್ಲಿ ಶಿಶಿಕ್ಷು ತರಬೇತಿ ; ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು :  ಉದ್ಯೋಗಾಕಾಂಕ್ಷಿ ಯುವಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಿವಮೊಗ್ಗ ವಿಭಾಗವು ಉತ್ತಮ ಅವಕಾಶ ಕಲ್ಪಿಸಿದ್ದು, ವಿವಿಧ ತಾಂತ್ರಿಕ ವೃತ್ತಿಗಳಲ್ಲಿ ಒಂದು ವರ್ಷದ ಶಿಶಿಕ್ಷು (ಅಪ್ರೆಂಟಿಸ್) ತರಬೇತಿಗಾಗಿ ಐಟಿಐ ಉತ್ತೀರ್ಣ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜುಲೈ 5ರೊಳಗೆ ಶಿವಮೊಗ್ಗ ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,ಶಿವಮೊಗ್ಗ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಖಾಲಿಯಿರುವ ತಾಂತ್ರಿಕ ವೃತ್ತಿಗಳಿಗೆ ಐಟಿಐ, ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕಲ್ (ಡಿಸೇಲ್), ವೆಲ್ಡರ್, ಕೋಪಾ (ಪಾಸಾ)/ ಡಿ.ಟಿ.ಪಿ.ಓ. ಒಂದು ವರ್ಷದ ತರಬೇತಿ ಮೇಲೆ ನಿಯೋಜಿಸಿಕೊಳ್ಳಲು ಐ.ಟಿ.ಐ. ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವಿಭಾಗೀಯ ಕಚೇರಿ, ಕ.ರಾ.ರ.ಸಾ.ನಿಗಮ, ಶಿವಮೊಗ್ಗ ಬಸ್ ನಿಲ್ದಾಣ ಇಲ್ಲಿ ಜು.05 ರೊಳಗೆ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ನಿಗಮದ ಸಂಬಂಧಪಟ್ಟ ಅಧಿಕಾರಿ/ಘಟಕ ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ-ಸಹಾಯ ಯೋಜನೆಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ವೆಬ್‌ಸೈಟ್ https://ssp.postmatric.karnataka.gov.in ಮೂಲಕ ದಿ: 31/08/2026 ರೊಳಗಾಗಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770004, ಇ-ಮೇಲ್ [email protected] ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ [email protected] ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular