HomeKarnatakaರಾಜ್ಯಕ್ಕೆ 1243 ಇವಿ ಚಾರ್ಜಿಂಗ್ ಕೇಂದ್ರಗಳಿಗೆ ಅನುಮೋದನೆ: HDK

ರಾಜ್ಯಕ್ಕೆ 1243 ಇವಿ ಚಾರ್ಜಿಂಗ್ ಕೇಂದ್ರಗಳಿಗೆ ಅನುಮೋದನೆ: HDK

ಬೆಂಗಳೂರು: ಪಿಎಂ ಇ- ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 123.26 ಕೋಟಿ ರೂಪಾಯಿ ವೆಚ್ಚದ 1243 ಹೊಸ ಇವಿ ಚಾರ್ಜಿಂಗ್ ಕೇಂದ್ರಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಪಿಎಂ ಇ ಡ್ರೈವ್ ಯೋಜನೆಯಡಿ ರಾಷ್ಟ್ರವಾಪಿ ಇವಿ ಚಾರ್ಜಿಂಗ್ ಮೂಲಸೌಕರ್ಯ ಸಕ್ರಿಯಗೊಳಿಸುವ ಕುರಿತ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಈ ಯೋಜನೆಯ ಮೂಲಕ ರಾಜ್ಯದ ಇವಿ ಕ್ಷೇತ್ರಕ್ಕೆ ದೊಡ್ಡ ಮಟ್ಟದ ಉತ್ತೇಜನ ಸಿಗಲಿದೆ. ವಿವಿಧ ರಾಜ್ಯಗಳು ಮತ್ತು ಕೇಂದ್ರದ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ 4874 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಇದುವರೆಗೆ 503.86 ಕೋಟಿ ರೂಪಾಯಿ ಮೌಲ್ಯದ ಪ್ರಸ್ತಾವನೆಗಳನ್ನು ಅನುಮೋದಿಸಲಾಗಿದೆ. ಬಿಪಿಸಿಎಲ್, ಐಓಸಿಎಲ್, ಎಚ್ಪಿಸಿಎಲ್ ನಂತಹ ಪ್ರಮುಖ ಸಂಸ್ಥೆಗಳು, ಆಂಧ್ರಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ, ಗುಜರಾತ್, ತಮಿಳುನಾಡು ರಾಜ್ಯಗಳು ಕೂಡ ಸೇರಿವೆ. ಬೆಂಗಳೂರು ಈಗಾಗಲೇ ಇವಿ ಚಾರ್ಜಿಂಗ್ ಹಬ್ ಆಗಿ ಹೊರಹೊಮ್ಮಿದ್ದು ಉಳಿದ ರಾಜ್ಯಗಳು ಕೂಡ ಈ ಪರಿವರ್ತನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದ ವಾಹನೋದ್ಯಮ ವಲಯವು ದೇಶದ ಜಿಡಿಪಿಗೆ ಶೇ.7ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತಿದೆ. ಇದು ಉತ್ಪಾದನಾ ಜಿಡಿಪಿಯ ಸುಮಾರು ಅರ್ಧದಷ್ಟಿದ್ದು, 30 ದಶಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿಸುತ್ತಿದೆ, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿ ಇದು ಗುರುತರ ಸಾಧನೆ ಎಂದು ಹೇಳಿದ್ದಾರೆ.

ಬೃಹತ್‌ ಕೈಗಾರಿಕೆ ಸಚಿವಾಲಯದಿಂದ ಬ್ಯಾಟರಿ ಸೆಲ್ ಉತ್ಪಾದನೆಗೆ 18,100 ಕೋಟಿ ರೂ. ಪಿಎಲ್‌ಐ ಎಸಿಸಿ ಯೋಜನೆ, ಇವಿ ಮತ್ತು ಹೈಡ್ರೋಜನ್ ಚಾಲಿತ ವಾಹನಗಳನ್ನು ಉತ್ತೇಜಿಸುವ 25,938 ಕೋಟಿ ರೂ. ಮೊತ್ತದ ಪಿಎಲ್‌ಐ ಆಟೋ ಯೋಜನೆ ಮತ್ತು ಅಪರೂಪದ ಅರ್ಥ್‌ ಮ್ಯಾಗ್ನೆಟ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲು 7,280 ಕೋಟಿ ರೂ. ವೆಚ್ಚದ ಆರ್‌ಇಪಿಎಂ ಯೋಜನೆ ಆರಂಭಿಸಲಾಗಿದೆ. ಭವಿಷ್ಯದ ವಾಹನೋದ್ಯಮ ತಂತ್ರಜ್ಞಾನದಲ್ಲಿ ಈ ಯೋಜನೆಗಳು ಭಾರತವನ್ನು ವಿಶ್ವದರ್ಜೆ ಸ್ಥಾನಕ್ಕೆ ಏರಿಸಲಿವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular