BIG NEWS : ಮುಂದಿನ ತಿಂಗಳು ರಾಜ್ಯಾದ್ಯಂತ ʻಅಪ್ಪು ಹೃದಯ ಜ್ಯೋತಿʼ ಯೋಜನೆಗೆ ಚಾಲನೆ : ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಮುಂದಿನ ತಿಂಗಳು ರಾಜ್ಯಾದ್ಯಂತ ಅಪ್ಪು ಹೃದಯಜ್ಯೋತಿ ಯೋಜನೆಯಡಿ ಟೆಲಿ ಇಸಿ ಹಬ್‌ ಗೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃತಕ ಬುದ್ದಿಮತ್ತೆ ಹಾಗೂ ಆಧುನಿಕ ತಂತ್ರಜ್ಞಾನವನ್ನು ಜನರ ಆರೋಗ್ಯ ಸುಧಾರಣೆಗೆ ಪರಿಣಾಮಕಾರಿಯಾಗಿ ಬಳಸಿಕೊಂಡು ಮೈಸೂರು, ಹುಬ್ಬಳ್ಳಿಯಲ್ಲಿ ಟೆಲಿ ಐಸಿಯು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಟೆಲಿ ಐಸಿಯು ಹಬ್‌ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಕಿಮ್ಸ್‌ ನಲ್ಲಿ ಇರುವ ಟೆಲಿ ಐಸಿಯು ಹಬ್‌ ಗೆ ಉತ್ತರ ಕರ್ನಾಟಕದ ಹಾವೇರಿ, ಶಿಗ್ಗಾಂವಿ, ಕುಂದಗೋಳ, ನರಗುಂದ, ಗೋಕಾಕ್‌, ಸವದತ್ತಿ, ಜಮಖಂಡಿ, ಬಸವನ ಬಾಗೇವಾಡಿ, ಭಟ್ಕಳ, ಯಲ್ಲಾಪುರ ಆಸ್ಪತ್ರೆಗಳನ್ನು ಜೋಡಿಸಲಾಗಿದೆ ಎಂದು ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳ ಉನ್ನತಿಕರಣಗೊಳಿಸಲು ಮತ್ತು ಎಲ್ಲ ಆಸ್ಪತ್ರೆಗಳನ್ನು ವಿವಿಧ ಹಂತಗಳಲ್ಲಿ ಮೇಲದರ್ಜೆಗೆ ಎರಿಸಲು ಆಧ್ಯತೆ ನೀಡಲಾಗುತ್ತೆದೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read