HomeKarnatakaಏಪ್ರಿಲ್ 5 ರ ಬದಲು 9 ರಂದು ಕೋಲಾರಕ್ಕೆ ರಾಹುಲ್ ಗಾಂಧಿ

ಏಪ್ರಿಲ್ 5 ರ ಬದಲು 9 ರಂದು ಕೋಲಾರಕ್ಕೆ ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರ ಬದಲಿಗೆ ಏ. 9 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ.

ಏ. 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಸತ್ಯಮೇವ ಜಯತೇ ಸಮಾವೇಶ ಏಪ್ರಿಲ್ 9 ರಂದು ನಡೆಯಲಿದೆ. ರಾಹುಲ್ ಗಾಂಧಿ ಕೋಲಾರ ಭೇಟಿ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವ ಭಾವಿ ಸಭೆ ಮೊಟಕುಗೊಳಿಸಲಾಗಿದ್ದು, ಮತ್ತೆ ಸಭೆಗೆ ದಿನ ನಿಗದಿ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಚುನಾವಣೆಯಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಮೋದಿ ಸರ್ ನೇಮ್ ಕುರಿತಾಗಿ ನೀಡಿದ ಹೇಳಿಕೆಯಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಕೋಲಾರದಿಂದಲೇ ಅವರು ಹೋರಾಟ ಪ್ರಾರಂಭಿಸಲಿದ್ದಾರೆ. ಸತ್ಯಮೇವ ಜಯತೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular