ಕಾರವಾರ: ಭಾರಿ ಮಳೆಯ ನಡುವೆಯೇ ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ನಡಿವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 25 ಜನರು ಪ್ರಯಾಣಿಕರಿದ್ದರು. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಪಲ್ಟಿಯಾಗಿರುವ ಬಸ್ ಸ್ವಲ್ಪ ಯಾಮಾರಿದರೂ ಪ್ರಪಾತಕ್ಕೆ ಉರುಳುತಿತ್ತು, ಅಪಘಾತದಿಂದಾಗಿ ಅರಬೈಲ್ ಘಟ್ಟದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ವಾಹನ ತೆರವುಗೊಳಿಸಿದ್ದಾರೆ
ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.