HomeLatest NewsBREAKING: ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್!

BREAKING: ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್!

ಕಾರವಾರ: ಭಾರಿ ಮಳೆಯ ನಡುವೆಯೇ ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ನಡಿವೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ.

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 25 ಜನರು ಪ್ರಯಾಣಿಕರಿದ್ದರು. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಲ್ಟಿಯಾಗಿರುವ ಬಸ್ ಸ್ವಲ್ಪ ಯಾಮಾರಿದರೂ ಪ್ರಪಾತಕ್ಕೆ ಉರುಳುತಿತ್ತು, ಅಪಘಾತದಿಂದಾಗಿ ಅರಬೈಲ್ ಘಟ್ಟದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ವಾಹನ ತೆರವುಗೊಳಿಸಿದ್ದಾರೆ

ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular