ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ನಡಿವೆ ಅರಬ್ಬಿ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಆತಕದ ವಾತಾವರಣ ಸೃಷ್ಟಿಯಾಗಿದೆ.
ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಸಮುದ್ರದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಉತ್ತರ ಕನ್ನಡ ಜಿಲ್ಲಾಡಳಿತ ಕಡಲ ತೀರದಲ್ಲಿ ಕಟ್ಟೆಚ್ಚರ ಘೋಷಿಸಿದೆ. ಸಮುದ್ರದ ಬಳಿ ಯಾರೂ ತೆರಳದಂತೆ ಸೂಚಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ರಕ್ಷಣೆಗೆ ಲೈಫ್ ಗಾರ್ಡ್, ಹೋಂ ಗಾರ್ಡ್ ಗಳನ್ನು ನೇಮಕ ಅಮಡಲಾಗಿದೆ. ಗಡಲ ತೀರಕ್ಕೆ ಪ್ರವಾಸಿಗರು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರು, ಸ್ಥಳೀಯರು, ಪ್ರವಾಸಿಗರು ಯಾರೂ ಸಮುದ್ರ ತೀರಕ್ಕೆ ಹೋಗಬಾರದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶ ನಿರ್ಲಕ್ಷಿಸಿ ಕೆಲ ಪ್ರವಾಸಿಗರು ಕಡಲ ತೀರದಲ್ಲಿ ಹುಚ್ಚಾಟವಾಡುತ್ತಿದ್ದು, ಲೈಫ್ ಗಾರ್ಡ್ ಗಳು ಪ್ರವಾಸಿಗರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಕಾರವಾರ, ಕಾಸರಕೋಡ, ಟೊಂಕಾ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಸಮುದ್ರದಲ್ಲಿ ಕ್ಷಣ ಕ್ಷಣಕ್ಕೂ ಅಲೆಗಳ ಅಬ್ಬರ ಹೆಚ್ಚುತ್ತಿದ್ದು, ಆತಂಕ ಸೃಷ್ಟಿಯಾಗಿದೆ.