HomeKarnatakaಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಕಾರವಾರ ಮೂಲದ 22 ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: ಕಾರವಾರ ಮೂಲದ 22 ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಇಕೆಗೆ ತೆರಳಿದ್ದ ಕಾರವಾರ ಮೂಲದ ಬೋಟ್ ಗೋವಾದಲ್ಲಿ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ನಡೆದಿದೆ.

ಕಾರವಾರ ಮೂಲದ ಪರ್ಷಿಯನ್ ಮಾದರಿಯ ಮೀನುಗಾರಿಕಾ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗೋವಾದ ಬೆತುಲ್ ಸಮುದ್ರ ಪ್ರದೇಶದಲ್ಲಿ ಬೋಟ್ ಮುಳುಗಡೆಯಾಗಿದೆ.

ಸದ್ಯದ ಮಾಹಿತಿ ಪ್ರಕಾರ ಬೋಟ್‌ನಲ್ಲಿದ್ದ 22 ಮೀನುಗಾರರನ್ನು ರಕ್ಷಿಸಲಾಗಿದೆ. ಅಕ್ಕ ಪಕ್ಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾರವಾರ ಮುದಗಾದ ದಿನೇಶ್ ಕಾಂಚನ್ ಎಂಬವರ ಮಾಲೀಕತ್ವದ ‘ಶ್ರೀ ಅಮ್ಮ’ ಹೆಸರಿನ ಪರ್ಷಿಯನ್ ಬೋಟ್ ಕಾರವಾರದ ಮುದಗಾ ಬಂದರಿನಿಂದ ವಾರದ ಹಿಂದೆ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಬೋಟ್ ಮುಳುಗಡೆ ಪರಿಣಾಮ ಬೋಟ್ ಹಾಗೂ ಬಲೆ ಸೇರಿ ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಅದೃಷ್ಟವಶಾತ್ ಮೀನುಗಾರರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular