ಬೆಂಗಳೂರು : ಇಂದು ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಅಂತಿಮ ಮಾಡುವ ಸಾಧ್ಯತೆಯಿದ್ದು, ಈ ಹುದ್ದೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೆಸರು ಕೂಡ ಕೇಳಿಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೈಕಮಾಂಡ್ ಬಳಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪಕ್ಷ ಜವಾಬ್ದಾರಿ ನೀಡಿದರೂ, ನೀಡದಿದ್ದರೂ ಪಕ್ಷದ ಪರ ಕೆಲಸ ಮಾಡುವೆ. ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ದ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಿಜೆಪಿ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಚರ್ಚೆ ನಡೆಸಲು ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಹೊರಟಿದ್ದಾರೆ.