HomeKarnatakaರಾಜ್ಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ: ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ...

ರಾಜ್ಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ: ಅಧಿಕೃತ ಅಭ್ಯರ್ಥಿ ಇದ್ದರೂ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ ಫಾರಂ

ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಅಚ್ಚರಿ ಬೆಳವಣಿಗೆ ನಡೆದಿದೆ. ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿ ಮತ್ತು ಸಿ ಫಾರಂ ಗಳನ್ನು ಇಮೇಲ್ ಮೂಲಕ ಕಳುಹಿಸಲಾಗಿದೆ.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಟಿ. ಕೃಷ್ಣೇಗೌಡ ಅವರು ಬಿಜೆಪಿಯಿಂದ ಬಿ ಮತ್ತು ಸಿ ಫಾರಂ ಪಡೆದುಕೊಂಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯೋಗಾರಮೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಎಂ.ಟಿ. ಕೃಷ್ಣೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ವತಿಯಿಂದ ಎಂ.ಟಿ. ಕೃಷ್ಣೇಗೌಡರಿಗೆ ಬಿಜೆಪಿ ಬಿ ಮತ್ತು ಸಿ ಫಾರಂ ನೀಡಲಾಗಿದ್ದು, ಅವರೇ ಪಕ್ಷದ ಅಧಿಕೃತ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿದೆ. ಏಪ್ರಿಲ್ 21 ರ ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಯೋಗಾರಮೇಶ್ ಅವರ ನಾಮಪತ್ರ ತಿರಸ್ಕೃತವಾದಲ್ಲಿ ಕೃಷ್ಣೇಗೌಡ ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular