ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅನೀಶ್ ಅಭಿನಯದ ಬಹು ನಿರೀಕ್ಷಿತ ‘ಆರಾಮಾ ಅರವಿಂದಸ್ವಾಮಿ’ ಚಿತ್ರ ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.
ಅಭಿಷೇಕ್ ಶೆಟ್ಟಿ ನಿರ್ದೇಶನದ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಅನೀಶ್, ಮಿಲನ ನಾಗರಾಜ್, ಹರ್ಷಿಕಾ ಶ್ರೀನಿವಾಸ್ ಪ್ರಮುಖ ಪಾತ್ರದಲ್ಲಿದ್ದು, 786 ಫಿಲಂಸ್ ಮತ್ತು ಆಲಿಕ್ಯಾ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಪ್ರಶಾಂತ್ ರೆಡ್ಡಿ ಮತ್ತು ಶ್ರೀಕಾಂತ್ ಪ್ರಸನ್ನ ನಿರ್ಮಾಣ ಮಾಡಿದ್ದಾರೆ. ಉಮೇಶ್ ಆರ್ ಬಿ ಸಂಕಲನ, ಶಿವ ಸಾಗರ್ ಛಾಯಾಗ್ರಾಹಣ ಹಾಗೂ ಬಾಬಾ ಭಾಸ್ಕರ್ ನೃತ್ಯ ನಿರ್ದೇಶನವಿದೆ.