ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆ: 8ರಲ್ಲಿ 7 ಸ್ಥಾನ ಗೆದ್ದ ಕಾಂಗ್ರೆಸ್

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. 8 ಸ್ಥಾನಗಳ ಪೈಕಿ 7 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದ್ದು, ದೋಸ್ತಿ ನಾಯಕರಿಗೆ ಮತ್ತೆ ಮುಖಭಂಗವಾಗಿದೆ.

ನ.23ರಂದು ಅರಸೀಕೆರೆ 8 ವಾರ್ಡ್ ಗಳಿಗೆ ಉಪಚುನಾವಣೆ ನಡೆದಿತ್ತು. ಇದೀಗ 8 ಸ್ಥಾನಗಳ ಪೈಕಿ 7 ಶಾನಗಲಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಪಡೆದಿದ್ದಾರೆ. ಇದು ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರಿಗೆ ಮುಖಭಂಗಕ್ಕೆ ಕಾರಣವಾಗಿದೆ.

6 ವಾರ್ಡ್ ಗಳಲ್ಲಿ ಜೆಡಿಎಸ್ ಹಾಗೂ 4 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಕೆಲ ವಾರ್ಡ್ ಗಳಲ್ಲಿ ಮೈತ್ರಿ ಮಾಡಿಕೊಂಡರೂ ಸೋಲನುಭವಿಸಿದ್ದಾರೆ. ಅರಸೀಕೆರೆ ನಗರಸಭೆ ವಾರ್ಡ್ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಕೊನೆಗೂ ಗೆದ್ದು ಬೀಗಿದ್ದು, ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read