ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳು, ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕಾಗಿ ನಾಟಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಪಟ್ಟಿಯನ್ನು ಜುಲೈ 20ರೊಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಡಿಸಿಇಟಿ ಅರ್ಜಿ ಪ್ರತಿ, ನಾಟಾ ಅಂಕ ಪಟ್ಟಿ, ಡಿಪ್ಲೊಮಾ ಅಂಕಪಟ್ಟಿ, ಅರ್ಜಿಯಲ್ಲಿ ಕ್ಲೇಮ್ ಮಾಡಿರುವ ಪ್ರಕಾರ ವ್ಯಾಸಂಗ ಪ್ರಮಾಣ ಪತ್ರ ಇತ್ಯಾದಿ ದಾಖಲೆಗಳ ಸಮೇತ ಬಂದು ಕೆಇಎ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

