HomeKarnatakaಕನ್ನಡಿಗರೇ....ಕುಂಭಮೇಳಕ್ಕೆ ತೆರಳಿದ ನಿಮ್ಮ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲವೇ..? ಈ ಸಂಖ್ಯೆಗೆ ಕರೆ ಮಾಡಿ.!

ಕನ್ನಡಿಗರೇ….ಕುಂಭಮೇಳಕ್ಕೆ ತೆರಳಿದ ನಿಮ್ಮ ಕುಟುಂಬದವರು ಸಂಪರ್ಕಕ್ಕೆ ಸಿಗುತ್ತಿಲ್ಲವೇ..? ಈ ಸಂಖ್ಯೆಗೆ ಕರೆ ಮಾಡಿ.!

ಬೆಂಗಳೂರು : ಕುಂಭಮೇಳ ಕಾಲ್ತುಳಿತ ದುರಂತ ಸಂಬಂಧ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಧಾವಿಸಿದೆ.

ನಿಮ್ಮ ಕುಟುಂಬದವರು ಕುಂಭಮೇಳಕ್ಕೆ ತೆರಳಿದ್ದು, ಅವರು ನಿಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲವೇ?. ಹಾಗಾದ್ರೆ, ನಾವು ನಿಮಗಾಗಿಯೇ ಸಹಾಯವಾಣಿ ತೆರೆದಿದ್ದೇವೆ. ಸಹಾಯವಾಣಿ ಸಂಖ್ಯೆ 080-22340676 ಗೆ ಸಂಪರ್ಕ ಮಾಡಬಹುದು.

ಮಹಾಕುಂಭಮೇಳ ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ. ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular