BREAKING NEWS: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಅಡಿಕೆ ತುಂಬಿದ್ದ ಲಾರಿ

ಶಿವಮೊಗ್ಗ: ಅಡಿಕೆ ತುಂಬಿದ್ದ ಲಾರಿಯೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಏಕಾಏಕಿ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚನ್ನಾಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಸುಮಾರು 20 ಟನ್ ನಷ್ಟು ಅಡಿಕೆ ತಿಂಬಿದ್ದ ಲಾರಿ ಇದ್ದಕ್ಕಿದ್ದಂತೆಯೇ ಹೊತ್ತಿ ಉರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಲಾರಿಯಲ್ಲಿದ್ದ ಅಡಿಕೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read