HomeKarnatakaಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ: ಅಡಿಕೆ ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಸಲ್ಲಾಬಿ ದೇವರ ಗುಂಡಿ ಬಳಿ ನಡೆದಿದೆ.

ವಾಸು(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಡಿಕೆ ಗಿಡಕ್ಕೆ ಔಷಧ ಸಿಂಪಡಿಸುವ ಕೆಲಸ ಮಾಡುತ್ತಿದ್ದ ವಾಸು ದೇವರಗುಂಡಿಯ ಗೋಪಾಲ ಅವರ ಅಡಿಕೆ ತೋಟದಲ್ಲಿ ಮರ ಹತ್ತಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಅಡಿಕೆ ಮರದಿಂದ ಕಾಲು ಜಾರಿ ಬಿದ್ದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular