HomeLatest Newsಯಡಿಯೂರಪ್ಪ, ಬೊಮ್ಮಾಯಿ, ದೇವೇಗೌಡ‌ರ ಮಕ್ಕಳು, ಮೊಮ್ಮಕ್ಕಳದು ಕುಟುಂಬ ರಾಜಕಾರಣ ಅಲ್ಲವೇ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಯಡಿಯೂರಪ್ಪ, ಬೊಮ್ಮಾಯಿ, ದೇವೇಗೌಡ‌ರ ಮಕ್ಕಳು, ಮೊಮ್ಮಕ್ಕಳದು ಕುಟುಂಬ ರಾಜಕಾರಣ ಅಲ್ಲವೇ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ದಾವಣಗೆರೆ: ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಇಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರ ಪರ ರೋಡ್ ಶೋ ನಡೆಸಿ, ಮಾತನಾಡಿದರು.

ಸಮರ್ಥ್ ಅತ್ಯಂತ ವಿದ್ಯಾವಂತ ಮತ್ತು ರಾಜಕಾರಣದ ಎಲ್ಲ ಅರ್ಹತೆಗಳಿರುವ ಸಮರ್ಥ ಅಭ್ಯರ್ಥಿ. ಇವರು ಗೆದ್ದು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ. ಎಲ್ಲಾ ಜನಪರ ಗುಣಗಳು ಸಮರ್ಥ್ ಅವರಲ್ಲಿದೆ.‌ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಸಾಕಷ್ಟಿದೆ. ಹೀಗಾಗಿ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆಗಳಿಗೆ 1.43 ಲಕ್ಷ ಕೋಟಿ ರೂ. ಹಣ ಖರ್ಚು ಮಾಡಿದ್ದೇವೆ. ಸಮರ್ಥ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ. ದಾವಣಗೆರೆಗೆ ಮಾತ್ರವೇ 538 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ಅಷ್ಟೂ ಹಣ ದಾವಣಗೆರೆ ಜನರ ಬದುಕಿಗೆ ಜಮೆ ಆಗಿದೆ. ಈ ಹಣ ಕೊಟ್ಟಿದ್ದನ್ನು ಬಿಜೆಪಿಯವರು ವಿರೋಧಿಸಿದ್ದರು. ಜನರ ಹಣವನ್ನು ಜನರಿಗೆ ವಾಪಾಸ್ ಕೊಡುವುದು ತಪ್ಪಾ ಎಂದು ಹೇಳಿದ್ದಾರೆ?

ಬಿಜೆಪಿ 2018 ರಲ್ಲಿ ತಮ್ಮ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಹತ್ತು ಪರ್ಸೆಂಟ್ ಕೂಡ ಭರವಸೆ ಈಡೇರಿಸಲಿಲ್ಲ. ಆದರೆ 2013 ರಲ್ಲಿ ನಾವು ನಮ್ಮ ಪ್ರಣಾಳಿಕೆಯಲ್ಲಿ 165 ಭರವಸೆ ನೀಡಿ ಅದರಲ್ಲಿ 158 ಈಡೇರಿಸಿ ನುಡಿದಂತೆ ನಡೆದಿದ್ದೇವೆ. 2023ರಲ್ಲೂ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿ ಐದಕ್ಕೆ ಐದೂ ಜಾರಿ ಮಾಡಿದ್ದೇವೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ಜನರ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ಸರ್ವ ಜಾತಿ ಜನಾಂಗಗಳನ್ನು ಒಟ್ಟಿಗೇ ಕರೆದೊಯ್ಯುತ್ತದೆ. ನಮ್ಮ ಗ್ಯಾರಂಟಿಗಳ ಫಲವನ್ನು ಎಲ್ಲಾ ಪಕ್ಷದವರೂ, ಎಲ್ಲಾ ಜಾತಿ, ಎಲ್ಲಾ ಧರ್ಮದವರೂ ಪಡೆಯುತ್ತಿದ್ದಾರೆ. ಆದ್ದರಿಂದ ನಮ್ಮದು “ಸರ್ವ ಜನಾಂಗದ ಶಾಂತಿಯ ತೋಟ”. ಕಾಂಗ್ರೆಸ್ ಮಹಾತ್ಮಗಾಂಧಿ, ಅಂಬೇಡ್ಕರ್, ಬಸವಣ್ಣನವರ ಆಶಯದ ಹಾದಿಯಲ್ಲಿ ನಡೆದರೆ, ಬಿಜೆಪಿ ಗೋಡ್ಸೆ, ಮನುವಾದಿಗಳ ಮಾತಿನಂತೆ ನಡೆಯುತ್ತದೆ ಎಂದು ಟೀಕಿಸಿದ್ದಾರೆ.

ಬಿಜೆಪಿಯವರು ನನ್ನನ್ನು ಸಾಲದ ರಾಮಯ್ಯ ಅಂತಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ ನಾನು ಅನ್ನದ ರಾಮಯ್ಯ ಎನ್ನುವುದನ್ನು ತೋರಿಸಿ. ನಮ್ಮ ಮೂಲ ಉದ್ದೇಶ ತಳ ಸಮುದಾಯದ ಅಭಿವೃದ್ದಿ. ಬಸವಣ್ಣ ಅವರ ಪರಿಕಲ್ಪನೆಯಲ್ಲಿ ನಾವು ಸರ್ಕಾರ ನಡೆಸುತ್ತಿದ್ದೇವೆ. ಮಧ್ಯವರ್ತಿಗಳ ಕಾಟ ಇಲ್ಲದೆ ಬಡವರ ಖಾತೆಗೆ ಹಣ ಹಾಕುತ್ತಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular